ಚಂದ್ರ ಶತಮಾನೋತ್ಸವ
ನಿಮಗೆ ನೆನಪಿಸುತ್ತಿದ್ದೇನೆ, ಅಷ್ಟೇ. ಇಪ್ಪತ್ತನೇ ಶತಮಾನದ ಖಗೋಳವಿಜ್ಞಾನ ರಂಗ ಕಂಡ ಅದ್ವಿತೀಯ ತಾರೆಯ ಜನ್ಮದಿನ ಬಂದಿದೆ. ತನ್ನ ಕಾಲದಲ್ಲಿಯೇ ದಂತಕಥೆಯಾದ ಇವರನ್ನು ವಿಜ್ಞಾನ ಲೇಖಕ ಮಿಲ್ಲರ್ “ನಕ್ಷತ್ರಲೋಕದ ಚಕ್ರವರ್ತಿ” ಎಂದು ಕರೆದಿದ್ದಾರೆ. ಈ ಅನಭಿಷಕ್ತ ಚಕ್ರವರ್ತಿಯೇ ಪ್ರೊ. ಎಸ್.ಚಂದ್ರಶೇಖರ್ - ಅತ್ಮೀಯರ ಪಾಲಿಗೆ ಚಂದ್ರ. ಹತ್ತೊಂಬತ್ತರ ಹರೆಯದಲ್ಲಿಯೇ ಇವರು ಸಾಗಿದ್ದು ಸಾಗರದಾಚೆಯ ಇಂಗ್ಲೆಂಡಿಗೆ ನಕ್ಷತ್ರಗಳ ಸಂಕೀರ್ಣ ಸಂರಚನೆಯ ಬಗ್ಗೆ ಅತ್ಯುನ್ನತ ಸಂಶೋಧನೆಗೆ. ರಾಯಲ್ ಸೊಸೈಟಿಯ ವಿದ್ವನ್ಮಣಿಗಳ ಸಭೆಯಲ್ಲಿ ತನ್ನ ನೂತನ ಸಿದ್ಧಾಂತವನ್ನು ಮಂಡಿಸಿ ಘನಂದಾರಿ ವಿಜ್ಞಾನಿಗಳಿಗೆ ಸಡ್ಡು ಹೊಡೆದರು; ಬಿಳಿ ದೊರೆಗಳ ಆಳ್ವಿಕೆಯ ದಿನಗಳ ಕೀಳರಿಮೆಯನ್ನು ತೊಡೆದು ಭಾರತೀಯ ಅಸ್ಮಿತೆಯನ್ನು ಪ್ರಪಂಚ ಮುಖಕ್ಕೆ ತೋರಿದರು. ಸಜ್ಜನಿಕೆಯ ಸಾಕಾರವಾಗಿದ್ದ ಇವರ ಜೀವನ - ಸಾಧನೆ ಎಲ್ಲವೂ ರೋಚಕ - ತಮ್ಮ ಕಾಲದಲ್ಲಿಯೆ ದಂತ ಕಥೆಯಾಗಿ ಹೋದರು. ಇರುತ್ತಿದ್ದರೆ ಇವರಿಗೆ ನೂರು ವರ್ಷಗಳಾಗುತ್ತಿದ್ದುವು. ಅಂದರೆ ವಿಜ್ಞಾನ ಪ್ರಿಯರಿಗೆ ಚಂದ್ರಶೇಖರ್ ಜನ್ಮ ಶತಮಾನೋತ್ಸವದ ಆಚರಣೆಯ ಸಂಭ್ರಮ. ಆ ಮೂಲಕ ಇನ್ನಷ್ಟು ವಿಜ್ಞಾನ ಚಿಂತನ ಮಂಥನಕ್ಕೊಂದು ಅವಕಾಶ. Read more…
ಇತ್ತೀಚೆಗಿನ ಪ್ರತಿಕ್ರಿಯೆಗಳು…